ಪ್ರಕಟನೆಗಳು
◼ ಸಾಹಿತ್ಯ ನೀಡುವಿಕೆಗಳು
ಮೇ: ಕಾವಲಿನಬುರುಜು ಅಥವಾ ಎಚ್ಚರ! ಪತ್ರಿಕೆಗಳಿಗೆ ಚಂದಾಗಳು. ಪಾಕ್ಷಿಕ ಮುದ್ರಣಗಳಿಗೆ ಒಂದು ವರ್ಷದ ಚಂದಾ ರೂ. 90.00. ಮಾಸಿಕ ಮುದ್ರಣಗಳ ಒಂದು ವರ್ಷದ ಚಂದಾಗಳು ಮತ್ತು ಪಾಕ್ಷಿಕ ಮುದ್ರಣಗಳ ಆರು ತಿಂಗಳಿನ ಚಂದಾಗಳು ರೂ. 45.00. ಮಾಸಿಕ ಮುದ್ರಣಗಳಿಗೆ ಆರು ತಿಂಗಳುಗಳ ಚಂದಾ ಇರುವುದಿಲ್ಲ. ಚಂದಾ ನಿರಾಕರಿಸಲ್ಪಟ್ಟಲ್ಲಿ, ಪತ್ರಿಕೆಗಳ ಬಿಡಿ ಪ್ರತಿಗಳು ರೂ. 4.00ರ ಕಾಣಿಕೆಗೆ ನೀಡಲ್ಪಡಬೇಕು. ಸೂಕ್ತವಾಗಿರುವಲ್ಲಿ, ಕುಟುಂಬ ಪುಸ್ತಕವು ನೀಡಲ್ಪಡಸಾಧ್ಯವಿದೆ.
ಜೂನ್: ನಿತ್ಯಜೀವಕ್ಕೆ ನಡೆಸುವ ಜ್ಞಾನ ಪುಸ್ತಕ ರೂ. 15.00ರ ಕಾಣಿಕೆಗೆ. ಪರ್ಯಾಯವಾಗಿ, ನೀವು ಭೂಮಿಯ ಮೇಲೆ ಪ್ರಮೋದವನದಲ್ಲಿ ಸದಾ ಜೀವಿಸಬಲ್ಲಿರಿ ಪುಸ್ತಕವನ್ನು ರೂ. 25.00ರ ಕಾಣಿಕೆಗೆ ನೀಡಸಾಧ್ಯವಿದೆ (ದೊಡ್ಡ ಸೈಸ್ ರೂ. 45.00ಕ್ಕೆ). ಸೂಕ್ತವಾಗಿರುವಲ್ಲಿ ಕುಟುಂಬ ಪುಸ್ತಕವನ್ನು, ಈ ಪುಸ್ತಕಗಳಲ್ಲಿ ಒಂದರೊಂದಿಗೆ ಸಹ ನೀಡಸಾಧ್ಯವಿದೆ.
ಜುಲೈ ಮತ್ತು ಆಗಸ್ಟ್: ಈ ಮುಂದಿರುವ 32 ಪುಟದ ಯಾವುದಾದರೂ ಬ್ರೋಷರ್‌ಗಳನ್ನು ರೂ. 5.00ರ ಕಾಣಿಕೆಗೆ ನೀಡಬಹುದು: “ಇಗೋ! ಎಲ್ಲವನ್ನು ಹೊಸದು ಮಾಡುತ್ತೇನೆ,” ಜೀವಿತದ ಉದ್ದೇಶವೇನು—ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ?, ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ?, ನಮ್ಮ ಸಮಸ್ಯೆಗಳು—ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು?, ನಿತ್ಯಕ್ಕೂ ಬಾಳುವ ದೈವಿಕ ನಾಮ (ಇಂಗ್ಲಿಷ್), ನೀವು ತ್ರಯೈಕ್ಯವನ್ನು ನಂಬ ಬೇಕೋ?, ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ, ಪ್ರಮೋದವನವನ್ನು ತರುವ ಸರಕಾರ (ಇಂಗ್ಲಿಷ್), ಮತ್ತು ಭೂಮಿಯಲ್ಲಿ ಸದಾಜೀವನವನ್ನು ಆನಂದಿಸಿರಿ!